Romans 5:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಕ್ರಿಸ್ತನ ರಕ್ತದ ಮೂಲಕವಾಗಿ ನೀತಿವಂತರಾಗಿದ್ದೇವೆ. ಆದ್ದರಿಂದ ಆತನ ಮೂಲಕ ದೇವರ ಕೋಪದಿಂದ ಖಂಡಿತವಾಗಿ ತಪ್ಪಿಸಿಕೊಳ್ಳುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
Kannada BSI Bible 2016
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕ ಬರುವ ಕೋಪಕ್ಕೆ ತಪ್ಪಿಸಿಕೊಳ್ಳುವದು ಮತ್ತೂ ನಿಶ್ಚಯವಲ್ಲವೇ.
Kannada Bible (KNCL) BSI 2016
ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನಾವು ಕ್ರಿಸ್ತ ಯೇಸುವಿನ ರಕ್ತದಿಂದ ನೀತಿವಂತರೆಂದು ನಿರ್ಣಯ ಹೊಂದಿರುವುದರಿಂದ, ಕ್ರಿಸ್ತ ಯೇಸುವಿನ ಮೂಲಕವಾಗಿಯೇ ದೇವರ ಕೋಪದಿಂದ ರಕ್ಷಿಸಲಾಗುವುದು ಇನ್ನೂ ಖಂಡಿತವಲ್ಲವೆ?