Romans 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ಕ್ರಿಸ್ತನು ಪಾಪದ ಶಕ್ತಿಯನ್ನು ಸೋಲಿಸುವುದಕ್ಕಾಗಿ ಒಂದೇ ಸಲ ಸತ್ತನು; ಅದು ಎಲ್ಲಾ ಕಾಲಕ್ಕೂ ಸಾಕಾಗಿದೆ. ಈಗ ಆತನಲ್ಲಿ ಹೊಸ ಜೀವಿತವಿದೆ. ದೇವರೊಂದಿಗೆ ಜೀವಿಸುವುದೇ ಆ ಹೊಸ ಜೀವಿತ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
Kannada BSI Bible 2016
ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರಣವು ಇನ್ನೂ ಆತನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ. ಆತನು ಸತ್ತದ್ದು ಒಂದೇ ಸಾರಿ, ಅದು ಪಾಪದ ಪಾಲಿಗೆ; ಆತನು ಜೀವಿಸುವದು ದೇವರಿಗಾಗಿಯೇ.
Kannada Bible (KNCL) BSI 2016
ಏಕೆಂದರೆ, ಅವರು ಪಾಪದ ಪಾಲಿಗೆ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ಸತ್ತವರು. ಅವರು ಈಗ ಜೀವಿಸುವುದು ದೇವರಿಗಾಗಿಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸು ಪಾಪದ ಪಾಲಿಗೆ ಸತ್ತದ್ದೂ ಒಂದೇ ಸಾರಿಯಾಗಿರುತ್ತದೆ. ಆದರೆ, ಅವರು ಜೀವಿಸುವ ಜೀವಿತವು ದೇವರಿಗಾಗಿಯೇ.