Romans 6:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಂದಿನ ಕಾಲದಲ್ಲಿ ನೀವು ಪಾಪಕ್ಕೆ ಗುಲಾಮರಾಗಿದ್ದಿರಿ. ಪಾಪವು ನಿಮ್ಮನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ನಿಮಗೆ ಬೋಧಿಸಿದ ವಿಷಯಗಳಿಗೆ ನೀವು ಸಂಪೂರ್ಣವಾಗಿ ವಿಧೇಯರಾದ್ದರಿಂದ ದೇವರಿಗೆ ಸ್ತೋತ್ರವಾಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,
Kannada BSI Bible 2016
ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ಮುಂಚೆ ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಲ್ಪಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದದರಿಂದಲೂ
Kannada Bible (KNCL) BSI 2016
ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.