Romans 6:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
Kannada BSI Bible 2016
ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ನರಭಾವದ ಬಲಹೀನತೆಯ ದೆಸೆಯಿಂದ ಲೋಕರೀತಿಯಾಗಿ ಮಾತಾಡುತ್ತೇನೆ. ಅಧರ್ಮಮಾಡುವದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ ಅಧರ್ಮಕ್ಕೂ ದಾಸರನ್ನಾಗಿ ಒಪ್ಪಿಸಿಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
Kannada Bible (KNCL) BSI 2016
ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.