Romans 6:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಈಗ ನೀವು ಪಾಪದಿಂದ ಬಿಡುಗಡೆಯಾಗಿ ದೇವರ ಗುಲಾಮರಾಗಿದ್ದೀರಿ. ಇದರಿಂದ ನಿಮಗೆ ಪರಿಶುದ್ಧ ಜೀವನವೂ ನಿತ್ಯಜೀವವೂ ದೊರೆಯುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
Kannada BSI Bible 2016
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.
Kannada Bible (KNCL) BSI 2016
ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.