Romans 6:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನಲ್ಲಿ ಪಾಲುಗಾರರಾದೆವು ಎಂಬುದನ್ನು ನೀವು ಮರೆತುಬಿಟ್ಟಿರಾ? ನಮ್ಮ ದೀಕ್ಷಾಸ್ನಾನದ ಮೂಲಕ ನಾವು ಆತನ ಮರಣದಲ್ಲಿ ಪಾಲುಗಾರರಾದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
Kannada BSI Bible 2016
ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತ ಯೇಸುವಿನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಪಾಲುಗಾರರಾಗುವದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
Kannada Bible (KNCL) BSI 2016
ಕ್ರಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ?