Romans 6:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನ ಮರಣಕ್ಕೆ ಸದೃಶ್ಯವಾದ ಮರಣದ ಮೂಲಕ ನಾವು ಸಹ ಆತನೊಂದಿಗೆ ಐಕ್ಯರಾದೆವು. ಆದ್ದರಿಂದ ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಸಹ ಜೀವಂತವಾಗಿ ಎದ್ದುಬರುವುದರ ಮೂಲಕವಾಗಿ ಆತನೊಂದಿಗೆ ಐಕ್ಯರಾಗುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
Kannada BSI Bible 2016
ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ನಾವು ಆತನ ಮರಣಕ್ಕೆ ಸದೃಶವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
Kannada Bible (KNCL) BSI 2016
ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನ ಆದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು.