Romans 6:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಹಳೆಯ ಜೀವಿತವು ಕ್ರಿಸ್ತನೊಂದಿಗೆ ಶಿಲುಬೆಯ ಮೇಲೆ ಸತ್ತುಹೋಯಿತೆಂಬುದು ನಮಗೆ ಗೊತ್ತಿದೆ. ನಮ್ಮ ಪಾಪಸ್ವಭಾವಕ್ಕೆ ನಮ್ಮ ಮೇಲೆ ಯಾವ ಅಧಿಕಾರ ಇರಬಾರದೆಂತಲೂ ನಾವು ಪಾಪಕ್ಕೆ ಗುಲಾಮರಾಗಿರಬಾರದೆಂತಲೂ ಹೀಗಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
Kannada BSI Bible 2016
ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾಪಾಧೀನಸ್ವಭಾವವು ನಾಶವಾಗಿ ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿತೆಂದು ತಿಳಿದಿದ್ದೇವೆ.
Kannada Bible (KNCL) BSI 2016
ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.