Romans 7:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸಹೋದರಿಯರೇ, ನೀವೆಲ್ಲರು ಮೋಶೆಯ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳುತ್ತೀರಿ. ಒಬ್ಬ ವ್ಯಕ್ತಿಯು ಜೀವದಿಂದಿರುವವರೆಗೆ ಮಾತ್ರ ಧರ್ಮಶಾಸ್ತ್ರವು ಆ ವ್ಯಕ್ತಿಯನ್ನು ಆಳುತ್ತದೆ ಎಂಬುದು ನಿಮಗೆ ತಿಳಿದಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ?
Kannada BSI Bible 2016
ಸಹೋದರರೇ, (ನ್ಯಾಯಪ್ರಮಾಣವನ್ನು ತಿಳಿದವರಿಗೆ ನಾನು ಹೇಳುವದೇ ನಂದರೆ,) ಒಬ್ಬ ಮನುಷ್ಯನು ಜೀವದಿಂದಿರುವ ತನಕ ಅವನ ಮೇಲೆ ನ್ಯಾಯಪ್ರಮಾಣವು ಪ್ರಭುತ್ವ ಮಾಡುತ್ತ ದೆಂಬದು ನಿಮಗೆ ಗೊತ್ತಿಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರಿಗೆ ನಾನು ಹೇಳುವದೇನಂದರೆ - ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ಅವನ ಮೇಲೆ ಧರ್ಮಶಾಸ್ತ್ರದ ಅಧಿಕಾರವು ನಡೆಯುತ್ತದೆಂಬದು ನಿಮಗೆ ಗೊತ್ತಿಲ್ಲವೇ?
Kannada Bible (KNCL) BSI 2016
ಸಹೋದರರೇ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಧರ್ಮಶಾಸ್ತ್ರದ ನೇಮನಿಯಮಗಳಿಗೆ ಒಳಪಟ್ಟಿರುತ್ತಾನೆ. ಧರ್ಮಶಾಸ್ತ್ರವನ್ನು ಅರಿತಿರುವ ನೀವು ಇದನ್ನು ಗ್ರಹಿಸಿಕೊಳ್ಳಬಲ್ಲಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಿಯಮವನ್ನು ತಿಳಿದವರಿಗೆ ನಾನು ಹೇಳುವುದೇನೆಂದರೆ, ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ನಿಯಮಕ್ಕೆ ಅವನ ಮೇಲೆ ಅಧಿಕಾರ ಇರುತ್ತದೆಂದು ನೀವು ಬಲ್ಲಿರಿ.