Romans 7:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.
Kannada BSI Bible 2016
ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಹೇಳಬಾರದು. ಪಾಪವೇ ಮರಣಕ್ಕೆ ಕಾರಣವಾದದ್ದು; ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು; ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಕಾಣಬಂತು.
Kannada Bible (KNCL) BSI 2016
ಹಾಗಾದರೆ ಹಿತಕರವಾದದ್ದೇ ನನಗೆ ಮೃತ್ಯುಕಾರಕವಾಯಿತೇ? ಇಲ್ಲವೇ ಇಲ್ಲ! ಹಾಗೆ ಮೃತ್ಯುಕಾರಕವಾದುದು ಪಾಪವೇ. ತನ್ನ ನಿಜಸ್ವರೂಪವನ್ನು ತೋರಿಸುವುದಕ್ಕಾಗಿ ಪಾಪವು ನನಗೆ ಹಿತಕರವಾದುದನ್ನು ಉಪಯೋಗಿಸಿಕೊಂಡು ನನಗೆ ಮರಣವನ್ನು ತಂದಿತು. ಹೀಗೆ ಪಾಪವು ಅದೆಷ್ಟು ಭೀಕರವಾದುದೆಂದು ಆಜ್ಞೆಯ ಮೂಲಕ ವ್ಯಕ್ತವಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ ಒಳ್ಳೆಯದಾಗಿರುವ ನಿಯಮವೇ ನನಗೆ ಮರಣಕ್ಕೆ ಕಾರಣವಾಯಿತೋ? ಎಂದಿಗೂ ಇಲ್ಲ! ಆದರೂ ಪಾಪವು ಪಾಪವೇ ಎಂದು ಕಾಣುವಂತೆ ಒಳ್ಳೆಯದಾಗಿರುವ ನಿಯಮದ ಮೂಲಕವೇ ಪಾಪವು ನನ್ನಲ್ಲಿ ಮರಣವು ಉಂಟಾಗುವಂತೆ ಮಾಡಿತು. ಈ ರೀತಿಯಾಗಿ ಆಜ್ಞೆಯ ಮೂಲಕ ಪಾಪವು ಘೋರವಾದದ್ದೇ ಎಂದು ಕಂಡುಬರಲು ಸಾಧ್ಯವಾಯಿತು.