Romans 7:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ಆತ್ಮಿಕನಲ್ಲ. ನಾನು ಪಾಪಕ್ಕೆ ಮಾರಲ್ಪಟ್ಟ ಗುಲಾಮನೋ ಎಂಬಂತೆ ಪಾಪವು ನನ್ನನ್ನು ಆಳುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
Kannada BSI Bible 2016
ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಶಾಸ್ತ್ರವು ಪಾರಮಾರ್ಥಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ ಪಾಪದ ಸ್ವಾಧೀನದಲ್ಲಿರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
Kannada Bible (KNCL) BSI 2016
ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ.