Romans 7:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಮಾಡುವ ಕಾರ್ಯಗಳು ನನಗೇ ಅರ್ಥವಾಗುವುದಿಲ್ಲ. ನಾನು ಯಾವ ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಇಚ್ಛಿಸುತ್ತೇನೋ ಆ ಕಾರ್ಯಗಳನ್ನು ಮಾಡದೆ ನಾನು ದ್ವೇಷಿಸುವ ಕೆಟ್ಟಕಾರ್ಯಗಳನ್ನೇ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.
Kannada BSI Bible 2016
ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ನಾನು ಮಾಡುವದು ನನಗೇ ಗೊತ್ತಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಫೈಸುತ್ತೇನೋ ಅದನ್ನು ನಡಿಸದೆ ನನಗೆ ಅಸಹ್ಯವಾದದ್ದನ್ನು ಮಾಡುತ್ತೇನೆ.
Kannada Bible (KNCL) BSI 2016
ನಾನು ಮಾಡುವುದು ನನಗೇ ಅರ್ಥವಾಗುತ್ತಿಲ್ಲ. ಏನನ್ನು ಮಾಡಲು ಅಪೇಕ್ಷಿಸುತ್ತೇನೋ ಅದನ್ನು ಮಾಡುತ್ತಿಲ್ಲ. ಏನನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಏನು ಮಾಡುತ್ತೇನೆ ಎಂಬುದನ್ನು ತಿಳಿಯದವನಾಗಿದ್ದೇನೆ. ಏಕೆಂದರೆ ನಾನು ಮಾಡಬೇಕೆಂದು ಬಯಸುವುದನ್ನು ಮಾಡದೆ, ಯಾವುದನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುವವನಾಗಿದ್ದೇನೆ.