Romans 7:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ನನ್ನಲ್ಲಿ ಅಂದರೆ ನನ್ನ ಪಾಪಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂಬುದು ನನಗೆ ಗೊತ್ತಿದೆ. ಒಳ್ಳೆಯ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಮನಸ್ಸಿದ್ದರೂ ಅವುಗಳನ್ನು ಕಾರ್ಯಗತಗೊಳಿಸಲು ನನಗೆ ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.
Kannada BSI Bible 2016
ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೇದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ. ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
Kannada Bible (KNCL) BSI 2016
ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯತನವೆಂಬುದೇನೂ ನೆಲೆಗೊಂಡಿಲ್ಲ. ಇದು ನನಗೆ ಗೊತ್ತು. ಏಕೆಂದರೆ, ಒಳಿತನ್ನು ಮಾಡಬೇಕೆಂಬ ಮನಸ್ಸು ನನಗಿದ್ದರೂ ಅದನ್ನು ಮಾಡಲು ನನ್ನಿಂದ ಆಗುತ್ತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.