Romans 7:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.
Kannada BSI Bible 2016
ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಡಿಸುವವನು ಇದ್ದಾನೆಂಬದಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ. ಹೀಗಿರಲಾಗಿ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೆ ಆಳಾಗಿಯೂ ಶರೀರಭಾವದಿಂದ ಪಾಪವೆಂಬ ನಿಯಮಕ್ಕೆ ಆಳಾಗಿಯೂ ನಡಕೊಳ್ಳುವವನಾಗಿದ್ದೇನೆ.
Kannada Bible (KNCL) BSI 2016
ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.