Romans 7:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಸಹೋದರ ಸಹೋದರಿಯರೇ, ಇದೇ ರೀತಿಯಲ್ಲಿ ನಿಮ್ಮ ಹಳೆಯ ಸ್ವಭಾವವು ಸತ್ತುಹೋಯಿತು; ನೀವು ಕ್ರಿಸ್ತನ ದೇಹದ ಮೂಲಕ ಧರ್ಮಶಾಸ್ತ್ರದಿಂದ ಬಿಡುಗಡೆಯಾದಿರಿ. ಈಗ ನೀವು, ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಾತನಿಗೆ ಸೇರಿದವರಾಗಿದ್ದೀರಿ. ನಾವು ದೇವರಿಗೋಸ್ಕರ ಫಲವನ್ನು ಫಲಿಸುವುದಕ್ಕಾಗಿ ಕ್ರಿಸ್ತನಿಗೆ ಸೇರಿದವರಾಗಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.
Kannada BSI Bible 2016
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿರಿ. ದೇವರಿಗೆ ಫಲವಾಗುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
Kannada Bible (KNCL) BSI 2016
ಅಂತೆಯೇ, ಪ್ರಿಯ ಸಹೋದರರೇ, ನೀವು ಕ್ರಿಸ್ತಯೇಸುವಿನ ದೇಹದೊಂದಿಗೆ ಒಂದಾಗಿರುವುದರಿಂದ ಧರ್ಮಶಾಸ್ತ್ರದ ಪಾಲಿಗೆ ಸತ್ತವರಾದಿರಿ. ಇದರ ಪರಿಣಾಮವಾಗಿ, ಮರಣದಿಂದ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವಿನೊಂದಿಗೆ ಬಂಧಿತರಾಗಿದ್ದೀರಿ. ಹೀಗೆ, ದೇವರಿಗೆ ನಾವು ಸತ್ಫಲವನ್ನು ಈಯುವವರಾಗಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ.