Romans 7:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಂದಿನ ಕಾಲದಲ್ಲಿ, ನಮ್ಮ ಪಾಪಾಧೀನಸ್ವಭಾವವು ನಮ್ಮನ್ನು ಆಳುತ್ತಿತ್ತು. ಪಾಪಕೃತ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಧರ್ಮಶಾಸ್ತ್ರವು ನಮ್ಮಲ್ಲಿ ಉಂಟುಮಾಡಿತು. ಮತ್ತು ನಾವು ಮಾಡಲಿಚ್ಛಿಸಿದ್ದ ಆ ಪಾಪಕೃತ್ಯಗಳು ನಮ್ಮ ದೇಹಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡವು. ಇದರಿಂದಾಗಿ, ನಾವು ಮಾಡಿದ ಕಾರ್ಯಗಳೆಲ್ಲ ನಮಗೆ ಆತ್ಮಿಕ ಮರಣವನ್ನು ಮಾತ್ರ ಉಂಟು ಮಾಡುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.
Kannada BSI Bible 2016
ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಶರೀರಾಧೀನಸ್ವಭಾವವನ್ನು ಅನುಸರಿಸುತ್ತಿದ್ದಾಗ ದುರಾಶೆಗಳು ಧರ್ಮಶಾಸ್ತ್ರದಿಂದಲೇ ಪ್ರೇರಿತವಾಗಿ ನಮ್ಮ ಅಂಗಗಳಲ್ಲಿ ಯತ್ನೈಸುತ್ತಾ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.
Kannada Bible (KNCL) BSI 2016
ನಾವು ಶರೀರ ಸ್ವಭಾವಕ್ಕನುಸಾರವಾಗಿ ಬಾಳುತ್ತಿದ್ದಾಗ ಪಾಪಕರವಾದ ದುರಿಚ್ಛೆಗಳು ಧರ್ಮಶಾಸ್ತ್ರದಿಂದಲೇ ಪ್ರಚೋದಿತವಾಗಿ ನಮ್ಮ ಇಂದ್ರಿಯಗಳಲ್ಲಿ ಕಾರ್ಯನಿರತವಾಗಿದ್ದವು. ಪರಿಣಾಮವಾಗಿ, ನಾವು ಮೃತ್ಯುವಿಗೆ ಫಲವನ್ನು ಈಯುತ್ತಿದ್ದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.