Romans 7:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಂದಿನ ಕಾಲದಲ್ಲಿ, ಧರ್ಮಶಾಸ್ತ್ರವು ನಮ್ಮನ್ನು ಸೆರೆಯಾಳುಗಳಂತೆ ಬಂಧಿಸಿತ್ತು. ಆದರೆ ನಮ್ಮ ಹಳೆಯ ಸ್ವಭಾವವು ಸತ್ತುಹೋದ ಕಾರಣ ನಾವು ಧರ್ಮಶಾಸ್ತ್ರದಿಂದ ಬಿಡುಗಡೆಯಾದೆವು. ಆದ್ದರಿಂದ ಈಗ ನಾವು ಲಿಖಿತ ನಿಯಮಗಳೊಡನೆ ಹಳೇ ರೀತಿಯಲ್ಲಿ ದೇವರ ಸೇವೆಮಾಡದೆ ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ದೇವರ ಸೇವೆ ಮಾಡುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.
Kannada BSI Bible 2016
ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಲಾದರೋ ನಮ್ಮನ್ನು ವಶಮಾಡಿಕೊಂಡಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತಕಾರಣ ಆ ಧರ್ಮಶಾಸ್ತ್ರದಿಂದ ವಿಮುಕ್ತರಾಗಿದ್ದೇವೆ. ಹೀಗಿರಲಾಗಿ ಶಾಸ್ತ್ರದ ಹೊರಗಣ ಅರ್ಥಕ್ಕೆ ಅನುಕೂಲವಾದ ಹಳೇ ರೀತಿಯಲ್ಲಿ ನಾವು ದೇವರನ್ನು ಸೇವಿಸುವವರಲ್ಲ. ಪವಿತ್ರಾತ್ಮಪ್ರೇರಿತವಾದ ಹೊಸ ರೀತಿಯಲ್ಲಿ ಆತನನ್ನು ಸೇವಿಸುವವರಾಗಿದ್ದೇವೆ.
Kannada Bible (KNCL) BSI 2016
ಈಗಲಾದರೋ ನಮ್ಮನ್ನು ಬಂಧನದಲ್ಲಿಟ್ಟಿದ್ದ ಆ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತು, ಬಿಡುಗಡೆ ಹೊಂದಿದ್ದೇವೆ. ಆದ್ದರಿಂದ ಲಿಖಿತವಾದ ಹಳೆಯ ಶಾಸ್ತ್ರಕ್ಕೆ ಬದ್ಧರಾಗದೆ ಪವಿತ್ರಾತ್ಮಪ್ರೇರಿತವಾದ ನವೀನ ಮಾರ್ಗದಲ್ಲಿ ನಡೆಯುತ್ತಾ ಇದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗಲಾದರೋ ಒಂದು ಕಾಲದಲ್ಲಿ ನಮ್ಮನ್ನು ಯಾವುದು ಬಂಧನದಲ್ಲಿರಿಸಿತ್ತೋ ಅದಕ್ಕೆ ಸತ್ತವರಾಗಿದ್ದು ನಿಯಮದಿಂದ ಬಿಡುಗಡೆ ಹೊಂದಿದವರಾಗಿರುತ್ತೇವೆ. ಹೀಗೆ ನಾವು ಲಿಖಿತವಾದ ಹಳೆಯ ನಿಯಮದಂತೆ ನಡೆಯದೆ ಆತ್ಮದಿಂದ ನವಜೀವನದಲ್ಲಿ ನಡೆಯುವರಾಗಿದ್ದೇವೆ.