Romans 7:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಪಾಪವು ಆ ಆಜ್ಞೆಯನ್ನೇ ಬಳಸಿಕೊಂಡು ನನ್ನಲ್ಲಿ ಎಲ್ಲಾ ಬಗೆಯ ದುರಾಶೆಗಳನ್ನು ಕೆರಳಿಸಿತು. ಆದ್ದರಿಂದ ಆ ಆಜ್ಞೆಯಿಂದಾಗಿ ಪಾಪವು ನನ್ನ ಬಳಿಗೆ ಬಂದಿತು. ಆದರೆ ಧರ್ಮಶಾಸ್ತ್ರವಿಲ್ಲದಿದ್ದರೆ, ಪಾಪಕ್ಕೆ ಅಧಿಕಾರವೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.
Kannada BSI Bible 2016
ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಅಚೇತನವಾಗಿದೆ.
Kannada Bible (KNCL) BSI 2016
ಆದರೆ ಈ ಆಜ್ಞೆಯ ಮೂಲಕ ಪಾಪವು ಸಮಯ ಸಾಧಿಸಿ ನನ್ನಲ್ಲಿ ಎಲ್ಲಾ ವಿಧದ ದುರಾಶೆಗಳನ್ನು ಕೆರಳಿಸಿತು. ಧರ್ಮಶಾಸ್ತ್ರವಿಲ್ಲದೆ ಇದ್ದರೆ ಪಾಪವು ಸತ್ತಂತೆಯೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪಾಪವು, ಆ ಆಜ್ಞೆಯಿಂದ ಅನುಕೂಲ ಹೊಂದಿ ನನ್ನಲ್ಲಿ ಎಲ್ಲಾ ವಿಧದ ಆಶೆಗಳನ್ನು ಉಂಟುಮಾಡಿತು. ಏಕೆಂದರೆ ನಿಯಮವಿಲ್ಲದೆ ಪಾಪವು ಸತ್ತದ್ದಾಗಿರುತ್ತದೆ.