Romans 7:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಧರ್ಮಶಾಸ್ತ್ರವನ್ನು ತಿಳಿದುಕೊಳ್ಳುವುದಕ್ಕಿಂತ ಮೊದಲು ಧರ್ಮಶಾಸ್ತ್ರವಿಲ್ಲದವನಾಗಿ ಜೀವಂತವಾಗಿದ್ದೆನು. ಆದರೆ ಧರ್ಮಶಾಸ್ತ್ರದ ಆಜ್ಞೆಯು ನನ್ನ ಬಳಿಗೆ ಬಂದಾಗ, ಪಾಪವು ಜೀವಿಸತೊಡಗಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.
Kannada BSI Bible 2016
ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂತು, ನಾನು ಸತ್ತೆನು.
Kannada Bible (KNCL) BSI 2016
ಧರ್ಮಶಾಸ್ತ್ರದ ಅರಿವಿಲ್ಲದೆ ಒಮ್ಮೆ ನಾನು ಜೀವಿಸುತ್ತಿದ್ದೆನು; ಆಜ್ಞೆ ಎಂಬುದು ತಲೆದೋರಿದ ಕೂಡಲೇ ಪಾಪಕ್ಕೆ ಜೀವ ಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಮ್ಮೆ ನಾನು ನಿಯಮವಿಲ್ಲದೆ ಜೀವಿಸುತ್ತಿದ್ದೆನು. ಆದರೆ ಯಾವಾಗ ಆಜ್ಞೆಯು ಬಂದಿತೋ ಆಗ ಪಾಪವು ಜೀವಂತವಾಯಿತು, ನಾನು ಸತ್ತವನಾದೆನು.