Romans 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ನಾವು ನಮ್ಮ ಪಾಪಾಧೀನಸ್ವಭಾವದ ಆಳ್ವಿಕೆಗೆ ಒಳಗಾಗಿರಬಾರದು. ನಮ್ಮ ಪಾಪಸ್ವಭಾವದ ಬಯಕೆಗನುಸಾರವಾಗಿ ನಾವು ಜೀವಿಸಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ.
Kannada BSI Bible 2016
ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ [ಪವಿತ್ರಾತ್ಮಾನುಸಾರ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು] ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲ್ಲಿಲ್ಲ.
Kannada Bible (KNCL) BSI 2016
ಆದ್ದರಿಂದ ಸಹೋದರರೇ, ನಾವು ಶರೀರ ಸ್ವಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬಾಳುವ ಹಂಗಿನಲ್ಲೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ಪ್ರಿಯರೇ, ನಾವು ಮಾಂಸಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬದುಕಲು ಋಣಸ್ಥರಲ್ಲ.