Romans 8:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಈ ಆತ್ಮನ ಮೂಲಕವಾಗಿ ನಾವು, “\tl ಅಪ್ಪಾ\tl* ತಂದೆಯೇ” ಎಂದು ಹೇಳುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
Kannada BSI Bible 2016
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.
Kannada Bible (KNCL) BSI 2016
ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.
Recommended Reading