Romans 8:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,
Kannada BSI Bible 2016
ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಗತ್ತು ವ್ಯರ್ಥತ್ವಕ್ಕೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಫೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ.
Kannada Bible (KNCL) BSI 2016
ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ. ದೇವರ ಇಚ್ಛೆಯಿಂದಲೇ ಆಯಿತು. ಆದರೂ ಸೃಷ್ಟಿಗೆ ನಿರೀಕ್ಷೆಯೊಂದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೃಷ್ಟಿಯು ನಾಶಕ್ಕೆ ಒಳಗಾಯಿತು. ಆದರೆ ಸ್ವಂತ ಇಚ್ಛೆಯಿಂದಲ್ಲ. ಅದನ್ನು ನಿರೀಕ್ಷೆಯಿಂದ ಒಳಪಡಿಸಿದ ದೇವರಿಂದಲೇ ಆಯಿತು. ಆದರೂ ಸೃಷ್ಟಿಗೂ ನಿರೀಕ್ಷೆಯಿದೆ.