Romans 8:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.
Kannada BSI Bible 2016
ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆ ಪವಿತ್ರಾತ್ಮನು ಸಹ ನಮ್ಮ ಅಶಕ್ತಿಯನ್ನು ನೋಡಿ ಸಹಾಯಮಾಡುತ್ತಾನೆ. ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ.
Kannada Bible (KNCL) BSI 2016
ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.