Romans 8:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
Kannada BSI Bible 2016
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
Kannada Bible (KNCL) BSI 2016
ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.