Romans 8:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. (Verses 38-39)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,
Kannada BSI Bible 2016
ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ
Kannada Bible (KNCL) BSI 2016
ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ,