Romans 8:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಜೀವಿಸುವ ಜನರು ತಮ್ಮ ಪಾಪಸ್ವಭಾವವು ಬಯಸುವ ಸಂಗತಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ. ಆದರೆ ಆತ್ಮನಿಗನುಸಾರವಾಗಿ ಜೀವಿಸುವ ಜನರು ತಮ್ಮಿಂದ ಆತ್ಮನು ಅಪೇಕ್ಷಿಸುವ ಕಾರ್ಯಗಳ ಬಗ್ಗೆ ಆಲೋಚಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ, ಪವಿತ್ರಾತ್ಮನನ್ನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
Kannada BSI Bible 2016
ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶರೀರಭಾವವನ್ನು ಅನುಸರಿಸುವವರು ಅದಕ್ಕೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಪವಿತ್ರಾತ್ಮನನ್ನನುಸರಿಸುವವರು ಪವಿತ್ರಾತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
Kannada Bible (KNCL) BSI 2016
ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ಶರೀರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಪವಿತ್ರಾತ್ಮ ಅವರಿಗೆ ಅನುಸಾರವಾಗಿ ನಡೆಯುವವರಾದರೋ ಆತ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾಂಸಭಾವದವರಾಗಿ ಬಾಳುವವರ ಮನಸ್ಸು ಅದಕ್ಕೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಆದರೆ ಪವಿತ್ರಾತ್ಮ ದೇವರಿಗೆ ಅನುಸಾರವಾಗಿ ಬಾಳುವವರ ಮನಸ್ಸು ಪವಿತ್ರಾತ್ಮ ದೇವರಿಗೆ ಸಂಬಂಧಪಟ್ಟವುಗಳ ಮೇಲಿರುತ್ತದೆ.