Romans 9:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು” ಎಂದು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.
Kannada BSI Bible 2016
ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಫರೋಹನನ್ನು ಕುರಿತು - ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬದಾಗಿ ಶಾಸ್ತ್ರೋಕ್ತಿ ಉಂಟು.
Kannada Bible (KNCL) BSI 2016
ಪವಿತ್ರಗ್ರಂಥದಲ್ಲಿ ಫರೋಹನಿಗೆ ಹೀಗೆಂದು ಹೇಳಲಾಗಿದೆ: “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ಪ್ರದರ್ಶಿಸುವ ಸಲುವಾಗಿ ಹಾಗು ಜಗತ್ತಿನಲ್ಲೆಲ್ಲಾ ನನ್ನ ಹೆಸರನ್ನು ಪ್ರಖ್ಯಾತಪಡಿಸಿಕೊಳ್ಳುವ ಸಲುವಾಗಿ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,” ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ.