Romans 9:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?
Kannada BSI Bible 2016
ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೋ ಮನುಷ್ಯನೇ, ಹಾಗನ್ನಬೇಡ; ದೇವರಿಗೆ ಎದುರುಮಾತಾಡುವದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ - ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
Kannada Bible (KNCL) BSI 2016
ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?