Romans 9:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.
Kannada BSI Bible 2016
ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮ ಇಸಾಕ ಯಾಕೋಬರು ಅವರ ಪಿತೃಗಳೇ. ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದವನು, ಆತನು ಎಲ್ಲಾದರ ಮೇಲೆ ಒಡೆಯನೂ ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.
Kannada Bible (KNCL) BSI 2016
ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.