Romans 9:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ನಾನು ಯೆಹೂದ್ಯರ ವಿಷಯದಲ್ಲಿ ದುಃಖಿಸುತ್ತೇನೆ. ದೇವರು ತನ್ನ ವಾಗ್ದಾನವನ್ನು ನೆರವೇರಿಸುವುದರಲ್ಲಿ ವಿಫಲನಾದನೆಂದು ನಾನು ಹೇಳುತ್ತಿಲ್ಲ. ಏಕೆಂದರೆ ಇಸ್ರೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.
Kannada BSI Bible 2016
ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಹೇಳಿದ ಮಾತು ತಪ್ಪಿತೆಂದು ನಾವು ಭಾವಿಸಕೂಡದು. ಯಾಕಂದರೆ ಇಸ್ರಾಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ;
Kannada Bible (KNCL) BSI 2016
ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ದೇವರ ವಾಕ್ಯವು ನೆರವೇರಲಿಲ್ಲ ಎಂಬಂತೆ ಅಲ್ಲ. ಏಕೆಂದರೆ ಇಸ್ರಾಯೇಲ್ ವಂಶದಲ್ಲಿ ಬಂದವರೆಲ್ಲರೂ ಇಸ್ರಾಯೇಲರಲ್ಲ.