Romans 9:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ರಹಾಮನ ಸಂತತಿಗಳವರಲ್ಲಿ ಕೆಲವರು ಮಾತ್ರ ಅಬ್ರಹಾಮನ ನಿಜವಾದ ಮಕ್ಕಳಾಗಿದ್ದಾರೆ. ದೇವರು ಅವನಿಗೆ, “ಇಸಾಕನು ಮಾತ್ರ ನಿಮಗೆ ನ್ಯಾಯಬದ್ಧವಾದ ಮಗನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.
Kannada BSI Bible 2016
ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರು ಮಕ್ಕಳೆಂದು ಎಣಿಸಲ್ಪಡುವದಿಲ್ಲ. ಆದರೆ - ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು ಎಂದು ದೇವರು ಹೇಳಿದನು.
Kannada Bible (KNCL) BSI 2016
ಅಂತೆಯೇ ಅಬ್ರಹಾಮನ ಸಂತತಿಯಲ್ಲಿ ಹುಟ್ಟಿದ ಮಾತ್ರಕ್ಕೆ ಎಲ್ಲರೂ ಅಬ್ರಹಾಮನ ಮಕ್ಕಳಾಗುವುದಿಲ್ಲ. “ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ದೇವರು ಅಬ್ರಹಾಮನಿಗೆ ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಥವಾ ಅಬ್ರಹಾಮನ ಸಂತತಿಯವರೆಲ್ಲ ಅವನ ಮಕ್ಕಳಲ್ಲ. ಆದರೆ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ಹೇಳಲಾಗಿದೆ.