Romans 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದರರ್ಥವೇನೆಂದರೆ, ಶರೀರ ಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಾಗಿದ್ದಾರೆ. ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ದೇವರ (ನಿಜ) ಮಕ್ಕಳಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.
Kannada BSI Bible 2016
ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ, ವಾಗ್ದಾನಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬದು.
Kannada Bible (KNCL) BSI 2016
ಈ ಮಾತಿನ ಅರ್ಥವೇನೆಂದರೆ: ಶರೀರ ಸಂಬಂಧದಿಂದ ಹುಟ್ಟಿದವರೆಲ್ಲರೂ ದೇವರ ಮಕ್ಕಳಾಗುವುದಿಲ್ಲ; ದೈವವಾಗ್ದಾನದ ಪರಿಣಾಮವಾಗಿ ಹುಟ್ಟಿದವರೇ ನಿಜವಾಗಿಯೂ ಅಬ್ರಹಾಮನ ಸಂತತಿ ಎನಿಸಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ಅರ್ಥ, ಶರೀರಸಂಬಂಧದ ಮಕ್ಕಳು ದೇವರ ಮಕ್ಕಳಾಗಿರದೆ ವಾಗ್ದಾನದ ಮಕ್ಕಳೇ ಅಬ್ರಹಾಮನ ಮಕ್ಕಳೆಂದು ಎನಿಸಿಕೊಳ್ಳುವರು ಎಂಬುದು.