Ruth 1:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳ ಸೊಸೆಯಂದಿರು, “ನಾವು ನಿನ್ನ ಸಂಗಡ ಬಂದು ನಿನ್ನ ಜನರೊಡನೆ ಇರುತ್ತೇವೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಬಹಳ ದುಃಖದಿಂದ ಗಟ್ಟಿಯಾಗಿ ಅತ್ತು ನಾವೂ ನಿನ್ನ ಜೊತೆಯಲ್ಲೇ ನಿನ್ನ ಸ್ವಜನರ ಬಳಿಗೆ ಬರುತ್ತೇವೆ ಅನ್ನಲು,
Kannada BSI Bible 2016
ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ ನಿಶ್ಚಯವಾಗಿಯೂ ನಿನ್ನ ಜನರ ಬಳಿಗೆ ನಿನ್ನ ಸಂಗಡ ತಿರಿಗಿ ಬರುತ್ತೇವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವೂ ನಿನ್ನ ಜೊತೆಯಲ್ಲೇ ನಿನ್ನ ಸ್ವಜನರ ಬಳಿಗೆ ಬರುತ್ತೇವೆ ಅನ್ನಲು
Kannada Bible (KNCL) BSI 2016
ಆದರೆ ಅವರು, “ಇಲ್ಲಮ್ಮಾ, ನಿಮ್ಮನ್ನು ಬಿಟ್ಟು ಹೋಗಲಾರೆವು. ನಾವೂ ನಿಮ್ಮ ಜೊತೆಯಲ್ಲಿಯೇ ನಿಮ್ಮ ಸ್ವಜನರ ಬಳಿಗೆ ಬರುತ್ತೇವೆ,” ಎಂದು ಅಳಲಾರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ, “ನಿಶ್ಚಯವಾಗಿ ನಿಮ್ಮ ಜನರ ಬಳಿಗೆ ನಿಮ್ಮ ಸಂಗಡ ತಿರುಗಿ ಬರುತ್ತೇವೆ,” ಎಂದರು.