Ruth 1:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ತವರೂರಿಗೆ ಹೋಗಿರಿ! ನಾನು ಇನ್ನೊಂದು ಮದುವೆಯಾಗುವುದಕ್ಕೂ ಸಾಧ್ಯವಿಲ್ಲ. ನನಗೆ ತುಂಬಾ ವಯಸ್ಸಾಗಿದೆ. ನಾನು ನಿಮಗೆ ಸಹಾಯ ಮಾಡಲಾರೆ. ನಾನು ಇಂದು ರಾತ್ರಿಯೇ ಗರ್ಭಧರಿಸಿ ಇಬ್ಬರು ಗಂಡುಮಕ್ಕಳನ್ನು ಹೆತ್ತರೂ ನಿಮಗೆ ಅದರಿಂದ ಪ್ರಯೋಜನವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಮತ್ತೊಬ್ಬನನ್ನು ಪುನಃ ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಗಿದೆ. ಆದುದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ಆ ನಿರೀಕ್ಷೆಯಿಂದ ಈ ಹೊತ್ತೇ ನಾನು ಪುನಃ ಮದುವೆಯಾಗಿ ಮಕ್ಕಳನ್ನು ಹೆತ್ತರೂ,
Kannada BSI Bible 2016
ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಈ ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬನನ್ನು ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಯಿತು. ಆದದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ನಿರೀಕ್ಷೆಯಿಂದ ಈ ಹೊತ್ತೇ ಒಬ್ಬ ಗಂಡನನ್ನು ಕೂಡಿ ಮಕ್ಕಳನ್ನು ಹೆತ್ತರೂ
Kannada Bible (KNCL) BSI 2016
ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಪುನಃ ಮದುವೆಮಾಡಿಕೊಳ್ಳುವ ಪ್ರಾಯ ನನಗೆ ದಾಟಿಹೋಗಿದೆ. ಒಂದು ವೇಳೆ ಸಂತಾನಭಾಗ್ಯದ ನಿರೀಕ್ಷೆಯಿಂದ ಈ ಹೊತ್ತೇ ಮದುವೆಯಾಗಿ ಮಕ್ಕಳನ್ನು ಹಡೆದರೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಮಕ್ಕಳೇ, ನೀವು ನಿಮ್ಮ ಮನೆಗೆ ಹಿಂದಿರುಗಿ ಹೋಗಿರಿ. ಏಕೆಂದರೆ ನಾನು ಪುನಃ ಮದುವೆಮಾಡಿಕೊಳ್ಳುವ ಪ್ರಾಯ ನನಗೆ ದಾಟಿಹೋಗಿದೆ. ಒಂದು ವೇಳೆ, ನಾನು ಸಂತಾನವಾಗುವ ನಿರೀಕ್ಷೆಯಿಂದ ಈ ಹೊತ್ತೇ ಮದುವೆಯಾಗಿ ಮಕ್ಕಳನ್ನು ಹೆತ್ತರೂ,