Ruth 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಅವರನ್ನು ಮದುವೆಯಾಗಬೇಕಾದರೆ ಅವರು ಬೆಳೆದು ಪ್ರಾಯಕ್ಕೆ ಬರುವವರೆಗೆ ಕಾದುಕೊಂಡಿರಬೇಕಾಗುತ್ತದೆ. ನೀವು ಗಂಡಂದಿರ ಸಲುವಾಗಿ ಅಷ್ಟುಕಾಲ ಕಾದುಕೊಂಡಿರುವುದು ನನಗಿಷ್ಟವಿಲ್ಲ. ಅದು ನನಗೆ ದುಃಖವನ್ನು ಉಂಟುಮಾಡುತ್ತದೆ. ನಿಮ್ಮ ಕುರಿತು ನಾನು ತುಂಬಾ ದುಃಖಪಡುತ್ತೇನೆ, ಯೆಹೋವನ ಹಸ್ತವು ನನಗೆ ವಿರುದ್ಧವಾಗಿದೆ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದೊಡ್ಡವರಾಗುವ ತನಕ ನೀವು ಕಾದಿರುವಿರೋ? ಅಲ್ಲಿಯ ವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನ್ನಿಂದ ದೂರವಾಗಿರುವುದರಿಂದ ನಾನು ನಿಮಗಿಂತ ಹೆಚ್ಚಾಗಿ ದುಃಖಪಡುತ್ತೇನೆ” ಅಂದಳು.
Kannada BSI Bible 2016
ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದೊಡ್ಡವರಾಗುವ ತನಕ ಕಾದಿರುವಿರೋ? ಅಲ್ಲಿಯವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನಗೆ ವಿರೋಧವಾಗಿರುವದರಿಂದ ನಿಮಗೋಸ್ಕರ ಬಹಳ ದುಃಖಪಡುತ್ತೇನೆ ಅಂದಳು.
Kannada Bible (KNCL) BSI 2016
ಅವರು ಬೆಳೆದು ದೊಡ್ಡವರಾಗುವವರೆಗೂ ಮದುವೆಯಾಗದೆ ಇರುವಿರೋ? ಬೇಡ, ಮಕ್ಕಳೇ, ಸರ್ವೇಶ್ವರ ನನ್ನ ಕೈ ಬಿಟ್ಟಿದ್ದಾರೆ, ನಿಮಗಾಗಿ ನಾನು ಬಹಳ ವಿಷಾದಿಸುತ್ತೇನೆ,” ಎಂದು ಸಮಾಧಾನ ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದೊಡ್ಡವರಾಗುವವರೆಗೂ ಕಾದು ಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಇಲ್ಲ, ನನ್ನ ಮಕ್ಕಳೇ; ಯೆಹೋವ ದೇವರ ಹಸ್ತವು ನನಗೆ ವಿರೋಧವಾಗಿದೆ. ಆದ್ದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ,” ಎಂದಳು.