Ruth 1:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೊವೊಮಿಯು ಆಕೆಗೆ, “ನೋಡು, ನಿನ್ನ ಓರಗಿತ್ತಿಯು ಮತ್ತೆ ತನ್ನ ಜನರ ಬಳಿಗೂ ತನ್ನ ದೇವತೆಗಳ ಬಳಿಗೂ ಹೋಗುತ್ತಿದ್ದಾಳೆ. ನೀನೂ ಹಾಗೆಯೇ ಮಾಡು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,
Kannada BSI Bible 2016
ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೊವೊವಿುಯು ರೂತಳಿಗೆ - ಇಗೋ, ನಿನ್ನ ಓರಗಿತ್ತಿಯು ತಿರಿಗಿ ತನ್ನ ಜನರ ಬಳಿಗೂ ದೇವತೆಗಳ ಬಳಿಗೂ ಹೋಗುತ್ತಾಳೆ; ನೀನೂ ಆಕೆಯ ಜೊತೆಯಲ್ಲಿ ಹೋಗು ಅಂದಾಗ
Kannada Bible (KNCL) BSI 2016
ಆಗ ನವೊಮಿ ರೂತಳಿಗೆ: “ನೋಡು, ನಿನ್ನ ಓರಗಿತ್ತಿಯು ತನ್ನ ಜನಾಂಗದವರ ಬಳಿಗೂ ತನ್ನ ಕುಲದೇವರ ಬಳಿಗೂ ಹಿಂದಿರುಗಿ ಹೋಗಿದ್ದಾಳೆ. ನೀನೂ ಅವಳಂತೆಯೇ ಹೋಗಿಬಿಡು,” ಎಂದು ಒತ್ತಾಯಪಡಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೊವೊಮಿ, “ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರುಗಿ ಹೋದಳು. ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು,” ಎಂದಳು.