Ruth 1:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಬೇಕು. ಈ ಪ್ರತಿಜ್ಞೆಯನ್ನು ನಾನು ಪೂರ್ಣಗೊಳಿಸದಿದ್ದರೆ ನನ್ನನ್ನು ಶಿಕ್ಷಿಸು ಎಂದು ನಾನು ಯೆಹೋವನಲ್ಲಿ ಕೇಳಿಕೊಳ್ಳುತ್ತೇನೆ. ಮರಣವು ಮಾತ್ರ ನಮ್ಮಿಬ್ಬರನ್ನು ಅಗಲಿಸಬಲ್ಲದು” ಎಂದು ದೃಢವಾಗಿ ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.
Kannada BSI Bible 2016
ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂದಳು.
Kannada Bible (KNCL) BSI 2016
ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು; ನೀವು ಸಾಯುವಲ್ಲೇ ನಾನು ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಲ್ಲಿಯೂ ನಾನು ನಿಮ್ಮನ್ನು ಬಿಟ್ಟಿರಲಾರೆ. ಇಲ್ಲದಿದ್ದರೆ ಸರ್ವೇಶ್ವರ ನನಗೆ ತಕ್ಕ ದಂಡನೆಯನ್ನು ವಿಧಿಸಲಿ!” ಎಂದು ಬೇಡಿಕೊಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಎಲ್ಲಿ ಸಾಯುತ್ತೀರೋ ಅಲ್ಲಿಯೇ ನಾನು ಸಾಯುವೆನು. ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಿಂದಲ್ಲದೆ ನಾನು ನಿಮ್ಮನ್ನು ಅಗಲಿದರೆ ಯೆಹೋವ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದಳು.