Ruth 1:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಹೆಂಡತಿಯ ಹೆಸರು ‘ನೊವೊಮಿ.’ ಅವನ ಇಬ್ಬರು ಗಂಡುಮಕ್ಕಳ ಹೆಸರುಗಳು: ಮಹ್ಲೋನ್ ಮತ್ತು ಕಿಲ್ಯೋನ್. ಅವರು ಯೆಹೂದಪ್ರಾಂತದ ಎಫ್ರಾತಿಗೆ ಸೇರಿದ ಬೆತ್ಲೆಹೇಮಿನ ನಿವಾಸಿಗಳು. ಇವರು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋಗಿ ಅಲ್ಲಿಯೇ ನೆಲೆಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನುಷ್ಯನ ಹೆಸರು ಎಲೀಮೆಲೆಕ, ಅವನ ಹೆಂಡತಿ ನವೊಮಿ. ಅವನ ಇಬ್ಬರು ಮಕ್ಕಳ ಹೆಸರು ಮಹ್ಲೋನ್ ಮತ್ತು ಕಿಲ್ಯೋನ್. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಮೋವಾಬ್ ದೇಶದಲ್ಲಿ ಬಂದು ವಾಸವಾಗಿದ್ದಾಗ
Kannada BSI Bible 2016
ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್‌ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನುಷ್ಯನಿಗೆ ಎಲೀಮೆಲೆಕನೆಂದೂ ಅವನ ಹೆಂಡತಿಗೆ ನೊವೊವಿುಯೆಂದೂ ಇಬ್ಬರು ಮಕ್ಕಳಿಗೆ ಮಹ್ಲೋನ್, ಕಿಲ್ಯೋನ್ ಎಂದೂ ಹೆಸರು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇವಿುನವರಾದ ಇವರು ಬಂದು ಮೋವಾಬ್ ದೇಶದಲ್ಲಿ ಪ್ರವಾಸವಾಗಿದ್ದಾಗ
Kannada Bible (KNCL) BSI 2016
ಅವನ ಹೆಸರು ಎಲಿಮೆಲೆಕ್; ಅವನ ಪತ್ನಿಯ ಹೆಸರು ನವೊಮಿ. ಮಹ್ಲೋನ್ ಮತ್ತು ಕಿಲ್ಯೋನ್ ಅವರ ಇಬ್ಬರು ಪುತ್ರರು. ಇವರು ಇಸ್ರಯೇಲ್ ವಂಶದ ಎಫ್ರಾತಕುಲಕ್ಕೆ ಸೇರಿದವರು, ಬೆತ್ಲೆಹೇಮಿನವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನುಷ್ಯನ ಹೆಸರು ಎಲೀಮೆಲೆಕನು. ಅವನ ಹೆಂಡತಿಯ ಹೆಸರು ನೊವೊಮಿ. ಅವನ ಪುತ್ರರಲ್ಲಿ ಒಬ್ಬನ ಹೆಸರು ಮಹ್ಲೋನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಬಂದು ಮೋವಾಬ್ ದೇಶದಲ್ಲಿ ವಾಸವಾಗಿದ್ದರು.