Ruth 1:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೊವೊಮಿಯು ಜನರಿಗೆ, “ನನ್ನನ್ನು ನೊವೊಮಿ ಎಂದು ಕರೆಯದೆ, ನನ್ನನ್ನು ಮಾರಾ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತನಾದ ದೇವರು ನನ್ನ ಜೀವನವನ್ನು ದುಃಖಕರವನ್ನಾಗಿ ಮಾಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.
Kannada BSI Bible 2016
ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಅವರಿಗೆ - ನನ್ನನ್ನು ನೊವೊವಿುಯೆಂದು ಕರೆಯಬೇಡಿರಿ; ಸರ್ವಶಕ್ತನು ನನ್ನನ್ನು ಬಹಳವಾಗಿ ದುಃಖಪಡಿಸಿದ್ದಾನೆ. ಆದದರಿಂದ ಮಾರಾ ಎಂದು ಕರೆಯಿರಿ.
Kannada Bible (KNCL) BSI 2016
ಅದಕ್ಕೆ ಅವಳು, “ನನ್ನನ್ನು ‘ನವೊಮಿ’ ಎಂದು ಕರೆಯಬೇಡಿ; ‘ಮಾರಾ’ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತ ದೇವರು ನನ್ನನ್ನು ಬಹಳ ದುಃಖಪಡಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆಕೆಯು ಅವರಿಗೆ, “ನನ್ನನ್ನು ‘ನೊವೊಮಿ’ ಎಂದು ಕರೆಯಬೇಡಿರಿ. ಮಾರಾ ಎಂದು ಕರೆಯಿರಿ ಏಕೆಂದರೆ ಸರ್ವಶಕ್ತರು ನನ್ನನ್ನು ಬಹು ದುಃಖದಿಂದ ನಡೆಸಿದರು.