Ruth 1:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಲ್ಲಿಂದ ಹೋಗುವಾಗ ಭಾಗ್ಯವಂತಳಾಗಿ ಹೋದೆನು; ಆದರೆ ಈಗ ಯೆಹೋವನು ನನ್ನನ್ನು ಬರಿಗೈಯಲ್ಲಿ ಮನೆಗೆ ಕರೆತಂದಿದ್ದಾನೆ. ಯೆಹೋವನು ನನ್ನನ್ನು ದುಃಖಿತಳನ್ನಾಗಿ ಮಾಡಿದ್ದಾನೆ. ಹೀಗಿರುವಾಗ ನೀವೇಕೆ ನನ್ನನ್ನು ‘ನೊವೊಮಿ’ ಎಂದು ಕರೆಯಬೇಕು? ಸರ್ವಶಕ್ತನಾದ ದೇವರು ನನಗೆ ಸಾಕಷ್ಟು ಕಷ್ಟ ಕೊಟ್ಟಿದ್ದಾನೆ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿರಿವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಹಿಂತಿರುಗುವಂತೆ ಮಾಡಿದನು. ಯೆಹೋವನು ನನಗೆ ವಿರೋಧವಾಗಿದ್ದಾನೆ, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಹೀಗಿರುವಾಗ ನೀವು ನನ್ನನ್ನು ನವೊಮಿಯೆಂದು ಕರೆಯುವುದು ಸರಿಯೇ” ಅಂದಳು.
Kannada BSI Bible 2016
ನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು.ಹೀಗೆ ನೊವೊಮಿ ಮೋವಾಬ್‌ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್‌ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭಾಗ್ಯವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಬರಮಾಡಿದನು. ಯೆಹೋವನು ನನಗೆ ವಿರೋಧವಾಗಿ ಸಾಕ್ಷಿಹೇಳಿದ್ದಾನೆ; ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಇದರಿಂದ ನೀವು ನನ್ನನ್ನು ನೊವೊವಿುಯೆಂದು ಕರೆಯುವದು ಹೇಗೆ ಅಂದಳು.
Kannada Bible (KNCL) BSI 2016
ಸಿರಿವಂತಳಾಗಿ ಇಲ್ಲಿಂದ ಹೋದೆ. ಗತಿಹೀನಳನ್ನಾಗಿ ಸರ್ವೇಶ್ವರ ನನ್ನನ್ನು ಹಿಂದಕ್ಕೆ ಕರೆತಂದಿದ್ದಾರೆ. ಹೀಗೆ ಸರ್ವಶಕ್ತ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವಾಗ ನೀವು ನನ್ನನ್ನು ನವೊಮಿ ಎಂದು ಕರೆಯುವುದು ಸರಿಯೇ?’ ಎಂದು ಉತ್ತರಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಪರಿಪೂರ್ಣಳಾಗಿ ಹೊರಟುಹೋದೆನು. ಯೆಹೋವ ದೇವರು ನನ್ನನ್ನು ಏನೂ ಇಲ್ಲದೆ ಬರಮಾಡಿದ್ದಾರೆ. ಯೆಹೋವ ದೇವರು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತರಾದ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವುದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವುದು ಸರಿಯೇ?” ಎಂದಳು.