Ruth 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಮಹ್ಲೋನ್ ಮತ್ತು ಕಿಲ್ಯೋನ್ ಸಹ ಸತ್ತುಹೋದರು. ಹೀಗಾಗಿ ನೊವೊಮಿಯು ತನ್ನ ಗಂಡನನ್ನೂ ಇಬ್ಬರು ಗಂಡುಮಕ್ಕಳನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು.
Kannada BSI Bible 2016
ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಆ ಸ್ತ್ರೀಯು ಗಂಡನನ್ನೂ ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
Kannada Bible (KNCL) BSI 2016
ಮಹ್ಲೋನ್ ಮತ್ತು ಕಿಲ್ಯೋನ್ ಸಹ ತೀರಿಹೋದರು. ಹೀಗೆ ನವೊಮಿ ತನ್ನ ಪತಿಯನ್ನೂ ಇಬ್ಬರು ಪುತ್ರರನ್ನೂ ಕಳೆದುಕೊಂಡು ಒಬ್ಬಂಟಿಗಳು ಆದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಯೇ ಮಹ್ಲೋನ ಮತ್ತು ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಪುತ್ರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.