Ruth 1:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೊವೊಮಿಯು ಮೋವಾಬ್ ಬೆಟ್ಟಪ್ರದೇಶದಲ್ಲಿದ್ದಾಗ ಯೆಹೋವನು ತನ್ನ ಜನರಿಗೆ ಕರುಣೆತೋರಿ ಆಹಾರವನ್ನು ಒದಗಿಸಿರುವ ಸುದ್ದಿಯು ನೊವೊಮಿಗೆ ತಿಳಿಯಿತು. ಆದ್ದರಿಂದ ಆಕೆಯು ಮೋವಾಬ್ ಬೆಟ್ಟಪ್ರದೇಶವನ್ನು ಬಿಟ್ಟು ತನ್ನ ಊರಿಗೆ ಹೋಗಲು ನಿರ್ಧರಿಸಿದಳು. ಅವಳ ಸೊಸೆಯಂದಿರು ಸಹ ಅವಳ ಸಂಗಡ ಹೋಗಲು ತೀರ್ಮಾನಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.
Kannada BSI Bible 2016
ಆದರೆ ಕರ್ತನು ತನ್ನ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದನೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ತಿರಿಗಿ ಹೋಗುವದಕ್ಕೋಸ್ಕರ ಪ್ರಯಾಣವಾಗಿ ತಾನು ಇದ್ದ ಸ್ಥಳವನ್ನು ಬಿಟ್ಟು ಹೊರ ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತನ್ನ ಜನರನ್ನು ಕಟಾಕ್ಷಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನೊವೊವಿುಯು ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ಸೊಸೆಯರೊಡನೆ ಹೊರಟಳು.
Kannada Bible (KNCL) BSI 2016
ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ತನ್ನ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆಗಳಾಗಿವೆ ಎಂಬ ಸಮಾಚಾರ ಮೋವಾಬ್ ನಾಡಿನಲ್ಲಿದ್ದ ನವೊಮಿಗೆ ತಿಳಿದು ಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ತಮ್ಮ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದರೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.