Ruth 1:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನೊವೊಮಿ ತನ್ನ ಸೊಸೆಯಂದಿರಿಗೆ, “ನೀವಿಬ್ಬರೂ ನಿಮ್ಮ ತಂದೆತಾಯಿಗಳ ಮನೆಗೆ ಹೋಗಿ. ನೀವು ನನ್ನನ್ನೂ ಸತ್ತುಹೋದ ನನ್ನ ಇಬ್ಬರು ಮಕ್ಕಳನ್ನೂ ತುಂಬ ಪ್ರೀತಿಯಿಂದ ನೋಡಿಕೊಂಡಿದ್ದೀರಿ. ಯೆಹೋವನು ನಿಮಗೆ ಅಷ್ಟೇ ಕೃಪೆಯನ್ನೂ ಪ್ರೀತಿಯನ್ನೂ ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ, “ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ, ಮರಣಹೊಂದಿದ ನನ್ನ ಮಕ್ಕಳನ್ನು ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ.
Kannada BSI Bible 2016
ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಿರಿಗಿ ನಿಮ್ಮ ನಿಮ್ಮ ತೌರಮನೆಗೆ ಹೋಗಿರಿ; ನೀವು ನನ್ನನ್ನೂ ಮರಣಹೊಂದಿದ ನನ್ನ ಮಕ್ಕಳನ್ನೂ ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆಮಾಡಲಿ.
Kannada Bible (KNCL) BSI 2016
ಹೀಗೆ ಹೋಗುತ್ತಿರುವಾಗ ದಾರಿಯಲ್ಲಿ ನವೊಮಿ ಅವರಿಗೆ: “ನೀವು ಇಬ್ಬರೂ ನಿಮ್ಮ ತವರುಮನೆಗಳಿಗೆ ಹಿಂದಿರುಗಿರಿ. ನನಗೂ ಮರಣಹೊಂದಿದ ನನ್ನ ಮಕ್ಕಳಿಗೂ ನೀವು ಒಳಿತು ಮಾಡಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ, “ನೀವು ನಿಮ್ಮ ನಿಮ್ಮ ತಾಯಿಯ ಮನೆಗೆ ತಿರುಗಿ ಹೋಗಿರಿ. ನೀವು ಮರಣ ಹೊಂದಿದ ಪತಿಯರಿಗೂ ನನಗೂ ದಯೆ ತೋರಿಸಿದ ಹಾಗೆಯೇ ಯೆಹೋವ ದೇವರು ನಿಮಗೆ ದಯೆ ತೋರಲಿ.