Ruth 1:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವಿಬ್ಬರೂ ಮದುವೆ ಮಾಡಿಕೊಂಡು ಒಳ್ಳೆಯ ಕುಟುಂಬವನ್ನು ಹೊಂದಿಕೊಳ್ಳಲು ಯೆಹೋವನು ನಿಮಗೆ ಸಹಾಯಮಾಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಹೇಳಿ ತನ್ನ ಸೊಸೆಯಂದಿರಿಗೆ ಮುದ್ದಿಟ್ಟಳು. ಅವರೆಲ್ಲರೂ ಅಳತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ” ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
Kannada BSI Bible 2016
ನೀವಿಬ್ಬರೂ ಮದುವೆ ಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದು ವಂತೆ ಕರ್ತನು ನಿಮಗೆ ಮಾಡಲಿ ಎಂದು ಹೇಳಿ ಅವರಿಗೆ ಮುದ್ದಿಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ವಿಶ್ರಾಂತಿಯಿಂದಿರುವಂತೆ ಯೆಹೋವನು ಅನುಗ್ರಹಿಸಲಿ ಎಂದು ಹೇಳಿ ಅವರನ್ನು ಮುದ್ದಿಟ್ಟಳು. ಆಗ ಅವರು ಗಟ್ಟಿಯಾಗಿ ಅತ್ತು -
Kannada Bible (KNCL) BSI 2016
ಸರ್ವೇಶ್ವರ ನಿಮಗೂ ಹಾಗೆಯೇ ಒಳಿತನ್ನು ಮಾಡಲಿ. ನೀವಿಬ್ಬರೂ ಪುನಃ ಮದುವೆಯಾಗಿ ಸುಖವಾಗಿರುವಂತೆ ಅನುಗ್ರಹಿಸಲಿ!” ಎಂದು ಹರಸಿ ಅವರನ್ನು ಬೀಳ್ಕೊಡುತ್ತಾ ಮುದ್ದಿಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಮದುವೆಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದುವಂತೆ, ಯೆಹೋವ ದೇವರು ಆಶೀರ್ವದಿಸಲಿ,” ಎಂದು ಹೇಳಿದಳು. ನಂತರ ನೊವೊಮಿಯು ಅವರಿಗೆ ಮುದ್ದಿಟ್ಟಳು.