Ruth 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರೂತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.
Kannada BSI Bible 2016
ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೂತಳು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ - ಪರದೇಶಿಯಾದ ನನ್ನಲ್ಲಿ ಇಷ್ಟು ಕಟಾಕ್ಷವೇಕೆ ಅನ್ನಲು
Kannada Bible (KNCL) BSI 2016
ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವಳು ಅವನಿಗೆ ಸಾಷ್ಟಾಂಗಬಿದ್ದು ವಂದಿಸಿ ಅವನಿಗೆ, “ಪರದೇಶಿಯಾದ ನನ್ನನ್ನು ಕಂಡು ನನ್ನ ಮೇಲೆ ನಿಮ್ಮ ದಯೆಯನ್ನು ತೋರಿಸಿದ್ದು ಏಕೆ?” ಎಂದಳು.