Ruth 2:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.
Kannada BSI Bible 2016
ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆಕೆಯು - ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತಾಡಿಸಿದಿರಿ ಅಂದಳು.
Kannada Bible (KNCL) BSI 2016
ಆಗ ರೂತಳು, “ಒಡೆಯಾ, ತಾವು ನನಗೆ ದೊಡ್ಡ ಉಪಕಾರವನ್ನು ಮಾಡಿದ್ದೀರಿ. ನಾನು ತಮ್ಮ ದಾಸಿ ಎನಿಸಿಕೊಳ್ಳುವುದಕ್ಕೂ ಯೋಗ್ಯಳಲ್ಲ. ಆದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿದ್ದೀರಿ,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವಳು, “ನನ್ನ ಒಡೆಯನೇ, ನನಗೆ ನಿಮ್ಮ ದೃಷ್ಟಿಯಲ್ಲಿ ಉಪಕಾರವಾಗಲಿ. ಏಕೆಂದರೆ ನಾನು ನಿಮ್ಮ ದಾಸಿಯರಲ್ಲಿ ಒಬ್ಬಳಂತೆ ನಿಲ್ಲುವುದಕ್ಕೂ ಯೋಗ್ಯಳಲ್ಲ ಆದರೂ ದಯೆಯಿಂದ ಮಾತನಾಡಿಸಿದಿರಿ” ಎಂದಳು.