Ruth 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಊಟದ ಸಮಯದಲ್ಲಿ ಬೋವಜನು ರೂತಳಿಗೆ, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ಹುಳಿರಸದಲ್ಲಿ ಅದ್ದಿಕೊಂಡು ತಿನ್ನು” ಎಂದು ಹೇಳಿದನು. ರೂತಳು ಕೆಲಸಗಾರರ ಜೊತೆ ಕುಳಿತುಕೊಂಡಳು. ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ರೂತಳು ಹೊಟ್ಟೆತುಂಬ ಊಟ ಮಾಡಿದ ಮೇಲೂ ಸ್ವಲ್ಪ ಆಹಾರ ಉಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು.
Kannada BSI Bible 2016
ಇದಲ್ಲದೆ ಬೋವಜನು ಅವಳಿಗೆ ಊಟದ ವೇಳೆಯಲ್ಲಿ ಹತ್ತಿರ ಬಂದು ರೊಟ್ಟಿಯ ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು ಅಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು ಇನ್ನೂ ಉಳಿಸಿಟ್ಟುಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊಟದ ವೇಳೆಯಾದಾಗ ಬೋವಜನು - ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು ಎಂದು ಕರೆಯಲು ಆಕೆಯು ಹೋಗಿ ಕೊಯ್ಯುವವರ ಬಳಿಯಲ್ಲಿ ಕೂತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಟ್ಟುಕೊಂಡಳು.
Kannada Bible (KNCL) BSI 2016
ಊಟದ ಸಮಯದಲ್ಲಿ ಬೋವಜನು ರೂತಳನ್ನು ಕರೆದು, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ದ್ರಾಕ್ಷಾರಸದಲ್ಲಿ ಅದ್ದಿ ತಿನ್ನು,” ಎಂದನು. ಆಕೆ ಕೊಯ್ಯುವವರ ಸಂಗಡ ಕುಳಿತುಕೊಂಡಳು. ಇದಲ್ಲದೆ ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಅವಳು ತೃಪ್ತಿಯಾಗಿ ಊಟಮಾಡಿ ಇನ್ನೂ ಸ್ವಲ್ಪ ಉಳಿಸಿಕೊಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಊಟದ ವೇಳೆಯಲ್ಲಿ ಬೋವಜನು ಅವಳಿಗೆ, “ಇಲ್ಲಿ ಹತ್ತಿರ ಬಂದು ರೊಟ್ಟಿ ತಿಂದು ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು,” ಎಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು, ಇನ್ನೂ ಉಳಿಸಿಕೊಂಡಳು.