Ruth 2:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೂತಳು ಸಾಯಂಕಾಲದವರೆಗೆ ಹೊಲದಲ್ಲಿ ಕೆಲಸ ಮಾಡಿದಳು. ಸಾಯಂಕಾಲ ತೆನೆಗಳನ್ನು ಬಡಿದು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿದಳು. ಸುಮಾರು ಮೂವತ್ತು ಸೇರು ಜವೆಗೋಧಿ ಸಿಕ್ಕಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೂತಳು ಸಾಯಂಕಾಲದ ವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು.
Kannada BSI Bible 2016
ಹಾಗೆಯೇ ಅವಳು ಸಾಯಂಕಾಲದ ವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಒಂದು ಏಫದಷ್ಟು ಜವೆಗೋಧಿಯಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೂತಳು ಸಾಯಂಕಾಲದವರೆಗೂ ಹಕ್ಕಲಾಯ್ದು ಕೂಡಿಸಿದ್ದನ್ನು ಬಡಿದಾಗ ಸುಮಾರು ಮೂವತ್ತು ಸೇರು ಜವೆಗೋದಿ ಸಿಕ್ಕಿತು.
Kannada Bible (KNCL) BSI 2016
ಅದರಂತೆಯೇ ರೂತಳು ಸಾಯಂಕಾಲದವರೆಗೆ ತೆನೆಗಳನ್ನು ಆಯ್ದುಕೊಂಡಳು. ಅವನ್ನು ಬಡಿದಾಗ ಸುಮಾರು ಅರ್ಧ ಚೀಲದಷ್ಟು ಜವೆಗೋದಿ ಸಿಕ್ಕಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅವಳು ಸಾಯಂಕಾಲದವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಮೂವತ್ತು ಕಿಲೋಗ್ರಾಂ ಜವೆಗೋಧಿಯಾಗಿತ್ತು.