Ruth 2:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ, “ನೀನು ಅವನ ಹೆಣ್ಣಾಳುಗಳ ಜೊತೆಯಲ್ಲಿ ಹೋಗುವುದೇ ಒಳ್ಳೆಯದು. ನೀನು ಬೇರೆ ಹೊಲಕ್ಕೆ ಹೋದರೆ ನಿನಗೆ ತೊಂದರೆಯಾಗಬಹುದು” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನವೊಮಿಯು ತನ್ನ ಸೊಸೆಯಾದ ರೂತಳಿಗೆ “ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವುದು ಒಳ್ಳೆಯದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು” ಎಂದು ಹೇಳಿದಳು.
Kannada BSI Bible 2016
ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೊವೊವಿುಯು ತನ್ನ ಸೊಸೆಯಾದ ರೂತಳಿಗೆ - ನನ್ನ ಮಗಳೇ, ನೀನು ಅವನ ಹೆಣ್ಣಾಳುಗಳ ಸಂಗಡಲೇ ಹೊರಟುಹೋಗುವದು ಒಳ್ಳೇದು; ಬೇರೆ ಹೊಲದಲ್ಲಿ ನಿನಗೆ ತೊಂದರೆಯಾದೀತು ಎಂದು ಹೇಳಿದಳು.
Kannada Bible (KNCL) BSI 2016
ಅದಕ್ಕೆ ನವೊಮಿ ತನ್ನ ಸೊಸೆಗೆ, “ಹೌದು, ಮಗಳೇ, ನೀನು ಆತನ ಹೆಣ್ಣಾಳುಗಳ ಸಂಗಡ ಇರುವುದೇ ಒಳ್ಳೆಯದು; ಬೇರೆಯವರ ಹೊಲದಲ್ಲಿ ನಿನಗೆ ತೊಂದರೆಯಾದೀತು,” ಎಂದು ಸಲಹೆಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ, “ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿಗಳ ಸಂಗಡ ಹೊರಟುಹೋಗುವುದು ಒಳ್ಳೆಯದು,” ಎಂದಳು.