Ruth 3:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುಣಿಯೇ, ಹೆದರಬೇಡ, ನಿನ್ನ ಇಚ್ಛೆಯನ್ನು ನೆರವೇರಿಸುತ್ತೇನೆ. ನೀನು ಒಳ್ಳೆಯ ಸ್ತ್ರೀ ಎಂಬುದನ್ನು ನಮ್ಮ ಪಟ್ಟಣದ ಎಲ್ಲರೂ ಬಲ್ಲರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.
Kannada BSI Bible 2016
ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬದು ಊರಿನವರಿಗೆಲ್ಲಾ ಗೊತ್ತದೆ; ಆದದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.
Kannada Bible (KNCL) BSI 2016
ಮಗಳೇ, ಭಯಪಡಬೇಡ, ನೀನು ಸುಗುಣಶೀಲೆ ಎಂದು ಊರಿಗೆಲ್ಲಾ ತಿಳಿದಿದೆ; ನೀನು ಕೇಳಿಕೊಂಡದ್ದನ್ನು ನೆರವೇರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನನ್ನ ಮಗಳೇ, ನೀನು ಭಯಪಡಬೇಡ. ನಿನಗೆ ಬೇಕಾಗಿರುವುದನ್ನು ನಿನಗೆ ಮಾಡುವೆನು. ನೀನು ಗುಣವತಿಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರೂ ಬಲ್ಲರು.